ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ 2,454 ಸಿಬ್ಬಂದಿಗಳ ನೇಮಕಾತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ರಾಜ್ಯ ಪೊಲೀಸ್ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿ ಕಾರಿಗಳ ವಾರ್ಷಿಕ ಸಮ್ಮೇ ಳನದಲ್ಲಿ ಭಾಗವಹಿಸಿ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಸಿಬಿ ಘಟಕಕ್ಕೆ 234 ಸಿಬ್ಬಂದಿ ಸೇರಿದಂತೆ ಕಮೀಷನರೇಟ್ ಹೊಸದಾಗಿ 2,454 ಹುದ್ದೆಗಳಿಗೆ ನೇಮಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಪೊಲೀಸರಿಗೆ ಶಕ್ತಿ ತುಂಬಲು ಸರ್ಕಾರ ಬದ್ಧವಾಗಿದೆ . ಸಿಬ್ಬಂದಿಗಳ ನೇಮಕಾತಿ ಜೊತೆ ಆರು ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿ ಸಲು ಆದೇಶಿಸಲಾಗಿದೆ. ಸಿಸಿಬಿ ಘಟಕಕ್ಕೆ 234 ಸಿಬ್ಬಂದಿ ಸೇರಿದಂತೆ ನಗರ ಕಮೀಷನರೇಟ್ಗೆ 2454 ಹುದ್ದೆ ಗಳನ್ನು ಸೃಷ್ಟಿ ಮಾಡುವುದರಿಂದ ಪೊಲೀಸ್ ವ್ಯವಸ್ಥೆಗೆ ಮತ್ತಷ್ಟು ಬಲ ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
2024-25ನೇ ಸಾಲಿನಲ್ಲಿ ಓರ್ವಎಸಿಪಿ, ಆರು ಪಿಐಗಳು, 162 ಪಿಎಸ್ಐಗಳು, 31 ಠಾಣೆಗಳು ಎಎಸ್ಐಗಳು, 236 ಹೆಡ್ ಕಾನ್ಸ್ಟೇಬಲ್ಗಳು ಹಾಗೂ 505 ಕಾನ್ಸ್ಟೇಬಲ್ಗಳು ಸೇರಿದಂತೆ 1228 ಹುದ್ದೆಗಳನ್ನು ಸೃಷಜಿಸುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ. ಕೇಂದ್ರ ಪಶ್ಚಿಮ, ಈಶಾನ್ಯ, ಆಗ್ನೆಯ ಮತ್ತು ವೈಟ್ ಫೀಲ್ಡ್ ವಿಭಾಗದಲ್ಲಿ ಮಹಿಳಾ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ ಎಂದರು.