alex Certify BIG NEWS : ಸ್ಯಾಂಡಲ್ ವುಡ್ ಗೆ ಸಿಎಂ ಗುಡ್ ನ್ಯೂಸ್ : ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಪುನರಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸ್ಯಾಂಡಲ್ ವುಡ್ ಗೆ ಸಿಎಂ ಗುಡ್ ನ್ಯೂಸ್ : ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಪುನರಾರಂಭ

ಬೆಂಗಳೂರು : ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಶಸ್ತಿಗೆ ಸಂಬಂಧಿಸಿದಂತೆ ಸಮಿತಿಗಳನ್ನು ಮಾಡಿದ್ದು, ಇವುಗಳು ವರದಿ ನೀಡಿದ ತಕ್ಷಣ ಈ ವರ್ಷದ್ದೂ ಸೇರಿದಂತೆ ಹಿಂದಿನ ವರ್ಷಗಳ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಫೆ.29 ರಿಂದ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಿದ್ದಾರೆ. ಈ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...