
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಂಕದ ಕಟ್ಟೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಕುಮಾರ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ, ಆರೋಪಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರನ್ನು ನಿಂದಿಸಿ, ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದ ಇದನ್ನು ಗಮನಿಸಿದ್ದ ಕಾಂಗ್ರೆಸ್ ನಾಯಕ ನವೀನ್ ಕುಮಾರ್, ಆರೋಪಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.