ಬೆಂಗಳೂರು: ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆಗೆ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ನಿರ್ಬಂಧ ಹೇರಲಾಗಿದೆ.
ಜೆಡಿಎಸ್ ನಿಂದ ಉಚ್ಛಾಟನೆಯಾದರೂ ಪಕ್ಷದ ಚಿಹ್ನೆ ಬಳಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದ್ದು, ಜೆಡಿಎಸ್ ಪಕ್ಷದ ಚಿಹ್ನೆ ಬಳಕೆ ಮಾಡದಂತೆ ಸೂಚಿಸಿದೆ.
ಜೆಡಿಎಸ್ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಪಕ್ಷದ ಕುರಿತಾಗಿ ಸುದ್ದಿಗೋಷ್ಠಿ ನಡೆಸುವಂತಿಲ್ಲ. ಪದಾಧಿಕಾರಿಗಳನ್ನು ನೇಮಕ ಮಾಡುವಂತಿಲ್ಲ ಎಂದು ಆದೇಶ ನೀಡಿದೆ.