alex Certify ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳಿಗೆ ಸಿ.ಎಂ. ಇಬ್ರಾಹಿಂ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳಿಗೆ ಸಿ.ಎಂ. ಇಬ್ರಾಹಿಂ ಶಾಕ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. ಇಬ್ರಾಹಿಂ ಮುಂದಾಗಿದ್ದಾರೆ.

ದಸರಾ ರಜೆ ಮುಗಿದ ನಂತರ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. ಇಬ್ರಾಹಿಂ ಸಜ್ಜಾಗಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಕಾನೂನು ಪಂಡಿತರ ಮೊರೆ ಹೋಗಿದ್ದಾರೆ. ಎರಡು ಮೂರು ದಿನದಲ್ಲಿ ಅವರು ಕೋರ್ಟ್ ಮೆಟ್ಟಿಲೇರಲಿದ್ದಾರೆ. ದಸರಾ ಹಬ್ಬ ಮುಗಿದ ಬಳಿಕ ದಳಪತಿಗಳ ವಿರುದ್ಧ ಕಾನೂನು ಹೋರಾಟ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಜತೆ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಿ.ಎಂ. ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ರಾಜ್ಯ ಸಮಿತಿಯನ್ನೇ ವಿಸರ್ಜಿಸಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...