ಮೈಸೂರು : ಮೈಸೂರಿನ ಡಿ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕು ಹಾಗೂ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.