alex Certify BIG BREAKING: ನಾನು ಮನಸ್ಸು ಮಾಡಿದ್ರೆ ಸಿಎಂ ಆಗ್ತೇನೆ: ಗಾಲಿ ಜನಾರ್ಧನ ರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಾನು ಮನಸ್ಸು ಮಾಡಿದ್ರೆ ಸಿಎಂ ಆಗ್ತೇನೆ: ಗಾಲಿ ಜನಾರ್ಧನ ರೆಡ್ಡಿ

ಬಳ್ಳಾರಿ: ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತೇನೆ. ಮನಸ್ಸು ಮಾಡಿದರೆ ಯಾವಾಗ ಬೇಕಾದರೂ ಮುಖ್ಯಮಂತ್ರಿಯಾಗಬಹುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸೋಮಶೇಖರರೆಡ್ಡಿ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದು ರೆಡ್ಡಿ-ರಾಮುಲು ಸೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗೆ ಶಾಸಕ ಆಗಬೇಕು, ಮಂತ್ರಿ ಆಗಬೇಕೆಂಬ ಆಸೆಯಿಲ್ಲ ಎಂದರು.

ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟರು. ಆದರೂ ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಅಂತಹ ವಿಶೇಷ ಆಶೀರ್ವಾದವನ್ನು ಕನಕ ದುರ್ಗಮ್ಮ ನೀಡಿದ್ದಾಳೆ. ನನ್ನ ಜಾಗದಲ್ಲಿ ಬೇರೆಯವರು ಇದ್ದಿದ್ದರೆ ಇಂತಹ ಪರಿಸ್ಥಿತಿ ಎದುರಿಸುತ್ತಿರಲಿಲ್ಲ. ಅಷ್ಟು ತೊಂದರೆಯನ್ನು ನನಗೆ ನೀಡಿದರು ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...