ಶಿವಮೊಗ್ಗ: ಹಿಂದೂಗಳ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಸಹೋದರ ಸಿ.ಎಂ. ಖಾದರ್ ವಿರುದ್ಧ ದೂರು ನೀಡಲಾಗಿದೆ.
ಭದ್ರಾವತಿ ನಗರ ನಿವಾಸಿಯಾಗಿರುವ ಸಿ.ಎಂ. ಖಾದರ್ ಹಿಂದೂಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಮತ್ತು ಅಸಭ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ವಡಿವೇಲು ಎಂಬುವವರು ಭದ್ರಾವತಿ ಹಳೆನಗರ ಠಾಣೆಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.