ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ತೀವ್ರ ಎದೆನೋವಿನಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ಗುರುಲಿಂಗಸ್ವಾಮಿ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ನಾಗರಬಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗುರುಲಿಂಗಸ್ವಾಮಿಯವರು ಆಸ್ಪತ್ರೆಗೆ ಬರುವ ಮೊದಲೇ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಬೊಮ್ಮಾಯಿ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಗುರುಲಿಂಗಸ್ವಾಮಿ ಗೃಹ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಗುರುಲಿಂಗಸ್ವಾಮಿ ಅವರನ್ನು ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಿಕೊಳ್ಳಲಾಗಿತ್ತು.