alex Certify ಶೇ. 50 ರ ಮಿತಿ, ನೈಟ್ ಕರ್ಫ್ಯೂ ನಿರ್ಬಂಧ ಸಡಿಲಿಕೆ ಬಗ್ಗೆ ನಿರ್ಧಾರ: ಇಂದು ಸಿಎಂ ಹೈವೋಲ್ಟೇಜ್ ಮೀಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೇ. 50 ರ ಮಿತಿ, ನೈಟ್ ಕರ್ಫ್ಯೂ ನಿರ್ಬಂಧ ಸಡಿಲಿಕೆ ಬಗ್ಗೆ ನಿರ್ಧಾರ: ಇಂದು ಸಿಎಂ ಹೈವೋಲ್ಟೇಜ್ ಮೀಟಿಂಗ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆ ಇರುವುದರಿಂದ ರಾಜ್ಯದಲ್ಲಿ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಶೇಕಡ 50 ರ ಮಿತಿ ನಿರ್ಬಂಧ ಸಡಿಲಿಕೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು. ಇದರೊಂದಿಗೆ ನೈಟ್ ಕರ್ಫ್ಯೂ ಸಮಯ ಬದಲಾವಣೆ, ಕರ್ಫ್ಯೂ ಮುಂದುವರಿಕೆ, ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿ ಆರಂಭ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸುವ ಸಾಧ್ಯತೆ ಇದೆ.

ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಶಾಲೆ ತೆರೆಯಲು ಶಿಫಾರಸು ಮಾಡಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಈಜುಕೊಳ, ಜಿಮ್, ಹೋಟೆಲ್, ಬಾರ್, ರೆಸ್ಟೋರೆಂಟ್, ಸಭಾಂಗಣಗಳಲ್ಲಿ ಶೇಕಡ 50 ರ ಮಿತಿ ಸಡಿಲಿಕೆ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ನೈಟ್ ಕರ್ಫ್ಯೂ ಮುಂದುವರಿಕೆ ಇಲ್ಲವೇ ಸಮಯ ಬದಲಾವಣೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...