
ಕಲಬುರಗಿ: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂದು ತಿಳಿಸಿದ್ದಾರೆ. ಹೀಗಾಗಿ ನಾವು ಯಾವ ಸಚಿವರು ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒಡಕಿಲ್ಲ ಎಂದು ಹೇಳಿದ್ದಾರೆ.
ಈ ಬಾರಿ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಮಾನ್ಯತೆ ಸಿಕ್ಕಿದೆ. ವೈದ್ಯಕೀಯ ಶಿಕ್ಷಣ ಇಲಾಖೆಗೂ ದೊಡ್ಡ ಕೊಡುಗೆ ನೀಡಿದ್ದಾರೆ. ಕಲಬುರಿಯಲ್ಲಿ 50 ಕೋಟಿ ವೆಚ್ಚದ ಮಧುಮೇಹ ಆಸ್ಪತ್ರೆ ಸ್ಥಾಪಿಸಲಾಗುವುದು. ಕೆಲವೇ ದಿನಗಳಲ್ಲಿ ನಾಲ್ಕೈದು ಆಸ್ಪತ್ರೆಗಳಿಗೆ ಅಡಿಗಲ್ಲು ಹಾಕಲಾಗುವುದು. 92 ಕೋಟಿ ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕ ಎಲ್ಲಾ ಭಾಗದಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.
ಬಜೆಟ್ ಅಂದ್ರೆ ಏನು ಅಂತ ಬಿಜೆಪಿಯವರಿಗೆ ಗೊತ್ತಿಲ್ಲ. ಸುಮ್ಮನೆ ಟೇಕಿಸುತ್ತಿದ್ದಾರೆ. ಬಜೆಟ್ ಬಗ್ಗೆ ತಲೆ ಬುಡ ಗೊತ್ತಿಲ್ಲದವರು ಹೀಗೆ ಮಾತನಾಡುತ್ತಾರೆ. ಯಾವುದೋ ಒಂದು ವಿಚಾರ ಇಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.