ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ.
ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ.
ವಿಶೇಷ ಅಂದರೆ ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಿಸುತ್ತಿದೆ.
2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ. ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.