
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು, ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ 50 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ.
ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣೆ ಚಿರಸ್ಮರಣೀಯ. ಮನೆಗೆ ಆಧಾರವಾಗಿದ್ದ ಪ್ರಾಂಜಲ್‌ರನ್ನು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ, ಅವರ ಕಷ್ಟಕ್ಕೆ ಹೆಗಲಾಗುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇನೆ.