ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಿಎಂ ಸಿದ್ದರಾಮಯ್ಯನವರೇ ಎ 1 ಆರೋಪಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಹಿಂದೆ ಕೇವಲ ಬಿ.ನಾಗೇಂದ್ರ ಇಲ್ಲ. ಸಿಎಂ ಸಿದ್ದರಾಮಯ್ಯನವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದ್ದಾರೆ.
ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟದೇ ಬಿಡಲ್ಲ. ಈ ಹಗರಣದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ . ಯಾವುದೇ ಕಾರಣಕ್ಕೂ ನಾವು ಹೋರಾಟ ಮಾಡುವುದನ್ನು ನಿಲ್ಲಿಸಲ್ಲ ಎಂದರು.
ರಾಮನ ಹೆಸರು ಹೇಳುವುದೂ ತಪ್ಪು
ಇದೇನು ಕಾಶ್ಮೀರವೋ ಅಥವಾ Pakistan occupied Karnataka (PoK) ಆಗಿದೆಯೋ ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ತಾಲಿಬಾನ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು. ರಾಮನ ಹೆಸರು ಹೇಳುವುದೂ ತಪ್ಪು, ಭಾರತ್ ಮಾತಾ ಕೀ ಜೈ ಎಂದರೂ ತಪ್ಪು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರ ಮೇಲೆ ಕಠಿಣ ಕ್ರಮ ಕೈಗೊಂಡು ಜೈಲಿಗಟ್ಟಿದ್ದರೆ ಇವತ್ತು ಭಾರತ್ ಮಾತಾ ಕಿ ಜೈ ಎನ್ನುವವರ ಮೇಲೆ ಕಲ್ಲು ತೂರುವ ಧೈರ್ಯ ಮಾಡುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ತಮ್ಮ ಸರ್ಕಾರ ಬಂದಾಗಿನಿಂದ ಮತಾಂಧರಿಗೆ, ತೀವ್ರವಾದಿ ಸಂಘಟನೆಗಳಿಗೆ ಕೊಂಬು ಬಂತಾಗಿದ್ದು, ದೇಶವಿದ್ರೋಹಿ ಘಟನೆಗಳು ಪದೇ ಪದೇ ನಡೆಯುತ್ತಲೇ ಇವೆ. ನಿಮ್ಮ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಮುಸ್ಲಿಂ ಮತಾಂಧ ಮುಳ್ಳುಗಳೇ ಹೆಚ್ಚಾಗಿದ್ದು, ಹಿಂದೂಗಳಿಗೆ, ದೇಶಪ್ರೇಮಿಗಳಿಗೆ ನೆಮ್ಮದಿ ಇಲ್ಲದಂತಾಗಿದೆ ಎಂದರು.