
ಬೆಂಗಳೂರು : ಸಿದ್ದರಾಮಯ್ಯ ಅವರು ಈ ಹಿಂದೆ ಬಿಜೆಪಿ ಬೆಂಬಲಿತ ಸರ್ಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಬಿಜೆಪಿಯಿಂದಲೂ ಫಲ ಉಂಡಿದ್ದರು ಎಂದು ಶಾಸಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಪಕ್ಷಾಂತರಿ, ಮೊದಲು ಸ್ವತಂತ್ರ ಅಭ್ಯರ್ಥಿಯಾಗಿ ರಾಜಕೀಯಕ್ಕೆ ಬಂದು ಸಮಾಜವಾದ ಪಕ್ಷ ಸೇರಿ, ನಂತರ ಜೆಡಿಎಸ್ ಗೆ ಬಂದು ಈಗ ಕಾಂಗ್ರೆಸ್ ನಲ್ಲಿದ್ದಾರೆ, ಮುಂದೆ ಯಾವ ಪಕ್ಷಕ್ಕೆ ಹೋಗುತ್ತಾರೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರು ಈ ಹಿಂದೆ ಬಿಜೆಪಿ ಬೆಂಬಲಿತ ಸರ್ಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದರು. ಈ ಮೂಲಕ ಬಿಜೆಪಿಯಿಂದಲೂ ಫಲ ಉಂಡಿದ್ದಾರೆ, ಅಧಿಕಾರ ಸಿಗುವ ಕಡೆ ಹೋಗುವ ಜಾಯಮಾನ ಸಿದ್ದರಾಮಯ್ಯರದ್ದು ಎಂದರು.