ಬೆಂಗಳೂರು : ಹುಬ್ಬಳ್ಳಿಯ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಇಂದು ಸಾವಿಗೀಡಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನು ನಿಂಗಪ್ಪ ಬೇಪಾರಿ ಹಾಗೂ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.
ಹುಬ್ಬಳ್ಳಿಯ ಉಣಕಲ್ ಅಯ್ಯಪ್ಪ ದೇವಾಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಹುಬ್ಬಳ್ಳಿಯ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಇಂದು ಸಾವಿಗೀಡಾಗಿದ್ದು, ಮುಖ್ಯಮಂತ್ರಿ @siddaramaiah ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನು ನಿಂಗಪ್ಪ ಬೇಪಾರಿ ಹಾಗೂ… pic.twitter.com/jX3IlCitoS
— DIPR Karnataka (@KarnatakaVarthe) December 26, 2024