ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಇದು ಅವರ ದಾಖಲೆಯ 15 ನೇ ಬಜೆಟ್ ಮಂಡನೆ ಆಗಿದೆ.
ವಕ್ಫ್ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ರೂ. ಮೀಸಲು, 100 ಮೌಲಾನಾ ಅಜಾದ್ ವಸತಿ ಶಾಲೆಗಳ ನಿರ್ಮಾಣ ಮಾಡಲಾಗುವುದು, ಅಲ್ಪಸಂಖ್ಯಾತ ಮಹಿಳೆಯರಿಗೆ ಆರ್ಥಿಕ ಉತ್ತೇಜನ, ಮಹಿಳಾ ಸ್ವಸಹಾಯ ಗುಂಪುಗಳಿಗೆ ೧೦ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ಯಾಚ್ಯುವಿಟಿ ಸೌಲಭ್ಯ ನೀಡಲಾಗುವುದು, ಅಂಗವಾಡಿ ಕಟ್ಟಡಬಳ ಅಭಿವೃದ್ಧಿಗೆ 300 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಲಾಗುವುದು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂಸಹಾಯಕಿಯರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುತ್ತಿದ್ದ ಮಂಡ್ಯದ ವಿ.ಸಿ. ಫಾರಂ ಕೃಷಿ ಕಾಲೇಜನ್ನು ಕೃಷಿ ವಿಶ್ವವಿದ್ಯಾಲಯವಾಗಿ ಮೇಲದರ್ಜೆಗೇರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣಾ ಕ್ಷೇತ್ರಕ್ಕೆ ಎರಡು ಸಾವಿರಕೋಟಿ ರೂ. ಮೀಸಲು, ಕಾಲುವೆಗಳ ಅಭಿವೃದ್ಧಿಗೆ ಎರಡು ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2024-25 ರಲ್ಲಿ 3 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.