![](https://kannadadunia.com/wp-content/uploads/2025/02/obc-meeting.png)
ಬೆಂಗಳೂರು: ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕರಿಗೆ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ಸಿಎಂ ಮಾತನಾಡಿದ್ದಾರೆ.
ಜಾತಿ ಗಣತಿ ವರದಿ ಜಾರಿಗೆ ಸಭೆಯಲ್ಲಿ ಮುಖಂಡರು ಒತ್ತಾಯಿಸಿದ್ದಾರೆ. ಜಾತಿಗಣತಿ ವರದಿ ಜಾರಿ ಮಾಡಿದರೆ ನಿಮ್ಮನ್ನು ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದು ಹೇಳಿದ್ದು, ಈ ವೇಳೆ ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
ಸರ್ಕಾರ ಜಾತಿ ಗಣತಿ ಪರವಾಗಿದ್ದು, ವೈಜ್ಞಾನಿಕ ವರದಿಯನ್ನು ಸ್ವೀಕರಿಸಲಾಗಿದೆ. ಖಂಡಿತವಾಗಿಯೂ ಜಾತಿ ಗಣತಿ ವರದಿ ಜಾರಿ ಮಾಡುತ್ತೇವೆ ಎಂದು ತಿಳಿಸಿದ ಸಿಎಂ ಸಮುದಾಯಗಳ ಕುಂದುಕೊರತೆಗಳು ಹಾಗೂ ನಿರೀಕ್ಷೆಗಳನ್ನು ಆಲಿಸಿ, ಅವುಗಳ ಈಡೇರಿಕೆಗೆ ಬಜೆಟ್ ಮೂಲಕ ಗರಿಷ್ಠ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದಾರೆ.
ಸಭೆಯಲ್ಲಿ ಶಿಕ್ಷಣ ಸಚಿವ ಮಧು ಎಸ್. ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು, ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.
ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ, ಇದರಲ್ಲಿ ಯಾವುದೇ ಸಂಶಯ ಬೇಡ.
ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು… pic.twitter.com/gYgFN746xd— Siddaramaiah (@siddaramaiah) February 18, 2025