ಬೆಂಗಳೂರು: ಮುಂದಿನ ವರ್ಷ 4.25 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹೊಸಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ, ಜೆಡಿಎಸ್ ನವರು ಅಭಿವೃದ್ಧಿ ಕೆಲಸ ಮಾಡಲು ಸರ್ಕಾರದಲ್ಲಿ ದುಡ್ಡಿಲ್ಲ ಖಜಾನೆ ಖಾಲಿಯಾಗಿದೆ ಎಂದು ಹೇಳುತ್ತಾರೆ. ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಇಲ್ಲಿ ನೀವೇ ಸಾಕ್ಷಿಯಾಗಿದ್ದೀರಿ. ಶರತ್ ಬಚ್ಚೇಗೌಡ ಮಾಯ ಮಂತ್ರ ಮಾಡಿಲ್ಲ. 600 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.
ಖಜಾನೆ ಖಾಲಿಯಾಗಿದ್ದರೆ ಇಷ್ಟೊಂದು ಕೆಲಸ ಆಗುತ್ತಿತ್ತೆ? ಬಿಜೆಪಿಯವರ ಮನೆದೇವರು ಸುಳ್ಳು. 2024 -25 ನೇ ಸಾಲಿನ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗೆ ಸೇರಿ 1.25 ಲಕ್ಷ ಕೋಟಿ ಇಟ್ಟಿದ್ದೇವೆ. ಸತ್ಯ ಗೊತ್ತಾಗಬೇಕು ಅಂದರೆ ಒಂದೇ ವೇದಿಕೆಗೆ ಬನ್ನಿ. ನಾವು, ನಮ್ಮ ಸಚಿವರು ಚರ್ಚೆಗೆ ಸಿದ್ಧವಿದ್ದೇವೆ. ಜನರ ಮುಂದೆಯೇ ಚರ್ಚೆ ಮಾಡೋಣ. ಏಕೆ ಸುಳ್ಳು ಹೇಳುತ್ತೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ. ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.