
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ.
ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.
ಮಾರ್ಚ್ 7ರಂದು 2025 -26 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದೇನೆ. ಮಾರ್ಚ್ ಕೊನೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.