ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ಮತ್ತು ಸಾಲದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಕಳೆದ ಬಾರಿ 3.27 ಲಕ್ಷ ಕೋಟಿ ಬಜೆಟ್ ಗಾತ್ರ ಇತ್ತು. ಈಗ 3.50 ಲಕ್ಷ ಕೋಟಿ ಅಥವಾ ರೂ. 3.80 ಲಕ್ಷ ಕೋಟಿ ರೂ.ಗೆ ಏರುವ ಸಾಧ್ಯತೆ ಇದೆ. ಕಳೆದ ಬಜೆಟ್ ನಲ್ಲಿ 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿ ರೂ.ಗೆ ಸಾಲ ಹೆಚ್ಚಾಗುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದ್ದು, ಭರಪೂರ ಕೊಡುಗೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಐದು ಗ್ಯಾರಂಟಿಗಳಿಗೆ 58,000 ಕೋಟಿ ರೂಪಾಯಿ ಮೀಸಲು ಅನಿವಾರ್ಯವಾಗಿದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳಿಗಾಗಿ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ತೆರಿಗೆ ಹೆಚ್ಚಳ ಮಾಡದೆ ಬಜೆಟ್ ಮಂಡಿಸುವ ಸವಾಲು ಕೂಡ ಎದುರಾಗಿದೆ. ಬರ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಮುಂಗಾರು ಮಳೆ ಬರುವವರೆಗೆ ಬರ ನಿರ್ವಹಣೆ ಮಾಡಬೇಕಾದ ಸಂದಿಗ್ಧ ಸ್ಥಿತಿ ಇದೆ. ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಹೆಚ್ಚಿನ ಒತ್ತು ನೀಡಬೇಕಿದೆ.