ಬೆಂಗಳೂರು: ನಾಡಿನ ಪುಣ್ಯಕ್ಷೇತ್ರಗಳ ಅಭಿವೃದ್ಧಿಯ ಸಂಕಲ್ಪದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ದಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಘೋಷಿಸಲಾಗಿದೆ.
ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ದಿಗೊಳಿಸಲು “ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ” ಸ್ಥಾಪನೆ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ.