ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿಗಳ ನಿವಾಸಕ್ಕೆ ಬಿಜೆಪಿ ಮುತ್ತಿಗೆ ಹಾಕುವ ಸಾಧ್ಯತೆ ಇದೆ.
ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಾಗಿದ್ದ ಹಣ ದುರ್ಬಳಕೆಯಾಗಿದ್ದು, ಲೋಕಸಭೆ ಚುನಾವಣೆಯ ವೇಳೆ ಹಣ ದುರ್ಬಳಕೆಯಾಗಿರುವ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿಗಳ ಅನುಮತಿ ಇಲ್ಲದೆ 187 ಕೋಟಿ ರೂ. ಹಗರಣ ಸಾಧ್ಯವಿಲ್ಲ ನಡೆಯಲು ಸಾಧ್ಯವಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಗುವುದು. ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿರುವ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಲಿದ್ದಾರೆ.