ಕಲಬುರಗಿ: 10 ವರ್ಷಗಳ ನಂತರ ಇಂದು ಕಲಬುರಗಿಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. 2014ರಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿದ್ದರು. ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುವುದು. ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ದಶಕದ ನಂತರ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೇರಿ ಹಲವು ಮಹತ್ವದ ಘೋಷಣೆಗಳ ಪ್ರಕಟಿಸುವ ನಿರೀಕ್ಷೆ ಇದೆ.
ಹೈದರಾಬಾದ್ ವಿಮೋಚನೆಯ ಐತಿಹಾಸದ ವಿಶೇಷ ದಿನವಾದ ಸೆಪ್ಟಂಬರ್ 17ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಈಗಾಗಲೇ ಸಚಿವರ ತಂಡ ಕಲಬುರಗಿಗೆ ಆಗಮಿಸಿದೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಡಾ.ಹೆಚ್.ಸಿ. ಮಹಾದೇವಪ್ಪ, ಬೈರತಿ ಸುರೇಶ್, ಕೆ.ಜೆ. ಜಾರ್ಜ್ ಸೇರಿ ಅನೇಕ ಸಚಿವರು ಕಲಬುರಗಿಗೆ ಆಗಮಿಸಿದ್ದಾರೆ.
ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಜನರಿಗೆ ಉದ್ಯೋಗಾವಕಾಶ ಹಾಗೂ ಪ್ರತ್ಯೇಕ ಸಚಿವಾಲಯ ಬಗ್ಗೆ ಚರ್ಚೆ ನಡೆಸಲಾಗುವುದು. ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಘೋಷಿಸಿದ ಯೋಜನೆಗಳ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.