alex Certify ಅವಕಾಶ ವಂಚಿತರ ಏಳಿಗೆಗೆ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವಕಾಶ ವಂಚಿತರ ಏಳಿಗೆಗೆ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ

ಬೆಂಗಳೂರು: ಅವಕಾಶ ವಂಚಿತರ ಹೇಳಿಕೆಗೆ ಸಹಕಾರಿಯಾಗುವ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತೋಹಳ್ಳಿಯಲ್ಲಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠ ಬೆಂಗಳೂರು ಶಾಖಾಮಠದ ಭೂಮಿ ಪೂಜೆ ಮತ್ತು ನೂತನ ಸಚಿವರು, ಶಾಸಕರ ಅಭಿನಂದನ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ದಪಡಿಸಿದ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ವರದಿಯನ್ನು ಕೆಲವು ತಾಂತ್ರಿಕ ದೋಷ ಸರಿಪಡಿಸಿದ ನಂತರ ರಾಜ್ಯ ಸರ್ಕಾರ ಸ್ವೀಕರಿಸಲಿದೆ ಎಂದು ತಿಳಿಸಿದ್ದಾರೆ.

ಜಾತಿ ವ್ಯವಸ್ಥೆ ಕಾರಣಕ್ಕೆ ಅನ್ಯಾಯಕ್ಕೆ ಒಳಪಟ್ಟು ಅವಕಾಶ ವಂಚಿತರಾಗಿ ಆರ್ಥಿಕ ಸಾಮಾಜಿಕ ರಾಜಕೀಯ ವ್ಯವಸ್ಥೆಗೆ ಬಲಿಪಶುಗಳಾದವರ ಏಳಿಗೆಗೆ ಜಾತಿಗಣತಿ ವರದಿ ಸಹಕಾರಿಯಾಗುತ್ತದೆ. ತಾರತಮ್ಯ ನಿವಾರಣೆಗೆ ಈ ರೀತಿಯ ಗಣತಿ ಮತ್ತು ಅಧ್ಯಯನಗಳು ಅಗತ್ಯವಾಗಿವೆ. ಕೆಲವು ತಾಂತ್ರಿಕ ದೋಷ ಸರಿಪಡಿಸಿದ ನಂತರ ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...