ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 6 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿನ ಹೆಲಿಪ್ಯಾಡ್ ಗೆ ಆಗಮಿಸುವರು.
ನಂತರ ಇಲ್ಲಿನ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಬೆ. 11.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಿರಿಯೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್ ಗೆ ಆಗಮಿಸುವರು. ಮಧ್ಯಾಹ್ನ 12.10 ಗಂಟೆಗೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂಗೆ ತೆರಳಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಆಯೋಜಿಸಿರುವ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2.40 ಗಂಟೆಗೆ ಹಿರಿಯೂರಿಗೆ ತೆರಳಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಆಯೋಜಿಸಿರುವ “ಕನಕ ಸಮುದಾಯ ಭವನ” ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸುವರು. ಮಧ್ಯಾಹ್ನ 3.10 ಗಂಟೆಗೆ ಹಿರಿಯೂರಿನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಸಚಿವರಾದ ಚಲುವರಾಯಸ್ವಾಮಿ, ಈಶ್ವರ್ ಖಂಡ್ರೆ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.