ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ಹೊಡೆದಿದ್ದು, ಅಧಿಕಾರಿಗಳ ಜೊತೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಮುಂದಾಗಿದ್ದಾರೆ.
ವಿಜಯನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ರಾಜಕಾಲುವೆಯಲ್ಲಿ ಮಳೆ ಬಂದಾಗ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಫ್ಲೈಓವರ್ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದ್ದು ಸಮಸ್ಯೆಗೆ ಕಾರಣವಾಗಿತ್ತು. ಇಂದು ಸ್ಥಳಕ್ಕೆ ಭೇಟಿನೀಡಿ ನೀರು ಸರಾಗವಾಗಿ ಹರಿದುಹೋಗಲು ಅಗತ್ಯವಿರುವ 7 ಕೋಟಿ ವೆಚ್ಚದ ಹೆಚ್ಚುವರಿ ಕಾಲುವೆ ಕಾಮಗಾರಿಗಾರಿಯನ್ನು ಕೂಡಲೇ ಬಿಬಿಎಂಪಿ ವತಿಯಿಂದ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದೆ. ಈ ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಿಲ್ಕ್ ಬೋರ್ಡ್ ಜಂಕ್ಷನ್, ಜಯನಗರ ಹಾಗೂ ಬಿಟಿಎಂ ನಿಂದ ಬನಶಂಕರಿ ಹೋಗುವ ಮಾರ್ಗದಲ್ಲಿ ಸಂಚಾರ ದಟ್ಟನೆಯಿಂದ ನಿತ್ಯ ಉದ್ಯೋಗ ಹಾಗೂ ಇನ್ನಿತರ ಕಾರಣಗಳಿಗಾಗಿ ಈ ರಸ್ತೆಯಲ್ಲಿ ತೆರಳುವ ಸಾವಿರಾರು ವಾಹನ ಸವಾರರಿಗೆ ಅನಾನುಕೂಲ ಆಗುತ್ತಿತ್ತು. ಇಂದು ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಬಿಟಿಎಂ ಮೆಟ್ರೋಸ್ಟೇಷನ್ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್ ಡೆಕ್ಕರ್ – 2 ಟೈರ್ ವ್ಯವಸ್ಥೆಯನ್ನು ಪರಿಶೀಲಿಸುವ ಸಂದರ್ಭದಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಇದೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದ್ದು, ವೇಗವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. ಇದಲ್ಲದೆ, ಸುಗಮ ಸಂಚಾರಕ್ಕಾಗಿ ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವ ರಸ್ತೆಯಲ್ಲಿ ರಾಘವೇಂದ್ರಸ್ವಾಮಿ ದೇವಸ್ಥಾನ ಸರ್ಕಲ್, ಜಯನಗರ 5ನೇ ಬ್ಲಾಕ್ನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಬೇಡಿಕೆ ಇದ್ದು, ಈ ಕಡೆಗಳಲ್ಲಿ ಅಂಡರ್ ಪಾಸ್ ನಿರ್ಮಿಸಲು ಸೂಚಿಸಿದ್ದಾರೆ.