ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದು, ಸರ್ಕಾರದಿಂದ ಮೋಡ ಬಿತ್ತನೆ ಮಾಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ, ಮೋಡ ಬಿತ್ತನೆ ಎಲ್ಲಿಯೂ ಯಶಸ್ವಿಯಾಗಿಲ್ಲ. ಹೀಗಾಗಿ ಮೋಡ ಬಿತ್ತನೆ ಮಾಡಲು ಸರ್ಕಾರ ಮುಂದಾಗಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೋಡ ಬಿತ್ತನೆ ಎಲ್ಲೂ ಯಶಸ್ವಿಯಾಗಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಮೋಡ ಬಿತ್ತನೆಗೆ ಸರ್ಕಾರ ಪ್ರಯತ್ನಿಸುವುದಿಲ್ಲ ಎಂದು ಸಂದೇಶ ನೀಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಬಗ್ಗೆ ಸಚಿವ ಸಂಪುಟ ಸಮಿತಿ ಚರ್ಚಿಸಿದ್ದು, ಶೀಘ್ರದಲ್ಲೇ ವರದಿ ಸಲ್ಲಿಸಲಿದೆ. ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಬರಗಾಲ ಘೋಷಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಪರಿಹಾರ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.