ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ.
ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ಹಿಟ್ಲರ್, ಮುಸಲೋನಿ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು. ಮೋದಿಯವರ ಕೈಯಲ್ಲಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಸುರಕ್ಷಿತವಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೊಳ್ಳೇಗಾಲದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಿಎಂ, ದೇಶದಲ್ಲಿ ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿ ಬಿಜೆಪಿ ದೂರು ನೀಡಿದೆ.