ಬೆಂಗಳೂರು : ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.