alex Certify BREAKING: ಎಸ್. ಎಂ. ಕೃಷ್ಣ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ: ಸಿಎಂ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎಸ್. ಎಂ. ಕೃಷ್ಣ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ: ಸಿಎಂ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಕೃಷ್ಣ ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...