ಬೆಂಗಳೂರು : ನಾಡಿನ ಸಮಸ್ತ ಯುವ ಜನತೆಗೆ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಯುವದಿನದ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಅಸ್ಪ್ರಶ್ಯತೆ, ಅಂಧ ಶ್ರದ್ಧೆಮತ್ತು ಪುರೋಹಿತಶಾಹಿ ಡಾಂಭಿಕತನವನ್ನು ತೊಲಗಿಸಿ ಹಿಂದೂ ಧರ್ಮದ ಸುಧಾರಣೆಗೆ ನಿರಂತರ ಪ್ರಯತ್ನ ಮಾಡಿದ ಸ್ವಾಮಿ ವಿವೇಕಾನಂದರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯೋಣ.ಬಡತನ ಮತ್ತು ಅನಾರೋಗ್ಯದಿಂದ ಕುಂದದೆಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ಕಿರಿ ವಯಸ್ಸಿನಲ್ಲಿಯೇ ವಿಶ್ವವೇ ತಲೆಬಾಗುವಂತಹ ಆಧ್ಯಾತ್ಮಿಕ ಗುರುವಾಗಿ ಬೆಳೆದು ನಿಂತ ಸ್ವಾಮಿ ವಿವೇಕಾನಂದರ ಬದುಕು ಮತ್ತು ಬರಹ ಯುವ ಸಮುದಾಯಕ್ಕೆ ಸದಾ ಸ್ಪೂರ್ತಿ.ನಾಡಿನ ಸಮಸ್ತ ಯುವಕ-ಯುವತಿಯರಿಗೆ ರಾಷ್ಟ್ರೀಯ ಯುವದಿನದ ಶುಭಾಶಯಗಳು’ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.