ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಗೆ ಮುಹೂರ್ತ ಫಿಕ್ಸ್ ಮಾಡಲಾಗುವುದು. ಶುಕ್ರವಾರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ.
5 ಗ್ಯಾರಂಟಿ ಜಾರಿ ಬಗ್ಗೆ ಸಂಪುಟದಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದ್ದು, ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅವರಿಂದಲೇ ಗ್ಯಾರಂಟಿ ಸ್ಕೀಂ ಘೋಷಣೆ ಜಾರಿ ಮಾಡಲಾಗುವುದು. ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆ ಜಾರಿ ಮಾಡಲಾಗುವುದು,
ಐದು ಗ್ಯಾರಂಟಿ ಯೋಜನೆಗಳನ್ನು ಏಕಕಾಲದಲ್ಲಿ ಜಾರಿಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯ ಬಳಿಕ ಸಿಎಂ 5 ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಲಿದ್ದಾರೆ. ನಂತರ ಶೀಘ್ರದಲ್ಲಿಯೇ ಫಲಾನುಭವಿಗಳಿಗೆ ವಿತರಿಸಲು ಸಾಂಕೇತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ನಂತರ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಹೇಳಲಾಗಿದೆ.