ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಶೇಕಡ 4ರಷ್ಟು ತುಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶದಿಂದ ನೌಕರರ ಮೂಲವೇತನದ ಶೇಕಡ 31 ರಿಂದ ಶೇಕಡ 35ಕ್ಕೆ ತುಟ್ಟಿ ಭತ್ಯೆ ಹೆಚ್ಚಳ ಆಗಲಿದೆ. 5.20 ಲಕ್ಷ ಸರ್ಕಾರಿ ನೌಕರರು, ನಿಗಮ ಮಂಡಳಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ 3 ಲಕ್ಷ ನೌಕರರು, 4.50 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ತುಟ್ಟಿಭತ್ಯೆ ತಡೆ ಹಿಡಿಯಲಾಗಿತ್ತು. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಜನವರಿ 1ರಿಂದಲೇ ಪೂರ್ವ ಅನ್ವಯವಾಗುವಂತೆ ತುಟ್ಟಿ ಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಜ. 1 ರಿಂದ ಅನ್ವಯವಾಗುವಂತೆ ಪರಿಷ್ಕೃತ ಡಿಎ ಮಂಜೂರು ಮಾಡಲಾಗಿದ್ದು, ಮೇ ತಿಂಗಳ ವೇತನದಲ್ಲಿ ನಗದು ರೂಪದಲ್ಲಿ ಪಾವತಿ ಮಾಡಲಾಗುವುದು. ನೌಕರರ ಸಂಘದ ಮನವಿ ಮೇರೆಗೆ ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ತುಟ್ಟಿಭತ್ಯೆ ಹೆಚ್ಚಳದ ಕಡತಕ್ಕೆ ಸಹಿ ಮಾಡಿದ್ದರು.