ಬೆಂಗಳೂರು : ಬೆಂಗಳೂರಿನಲ್ಲಿ ಕ್ವಿನ್ ಸಿಟಿ ನಿರ್ಮಾಣ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
ಕೆಎಚ್ಐಆರ್-ಸಿಟಿ ಯೋಜನೆಯಡಿ ರೂಪುಗೊಳ್ಳುತ್ತಿರುವ ಕ್ವಿನ್ ಸಿಟಿ ನಿರ್ಮಾಣ ಪಕ್ರಿಯೆಗೆ ಮುಖ್ಯಮಂತ್ರಿಗಳು, ಡಿಸಿಎಂ ಡಿಕೆಶಿ, ಸಚಿವರಾದ ಎಂಬಿ ಪಾಟೀಲ್ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಚಾಲನೆ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ”ಜಾಗತಿಕವಾಗಿ ಗುರುತಿಸಿಕೊಂಡಿರುವ ಬೆಂಗಳೂರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿರುವ ಈ ಕ್ವಿನ್ ಸಿಟಿ ಯೋಜನೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸುತ್ತೇವೆ. ಇತ್ತೀಚೆಗಷ್ಟೇ ಯಲಹಂಕದಲ್ಲಿ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರವನ್ನು ಆರಂಭಿಸಲಾಗಿದ್ದು, ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ಇನ್ನುಮುಂದೆ ಪವರ್ಕಟ್ ಆಗುವುದಿಲ್ಲ. ಸದ್ಯದಲ್ಲೇ ಕಾವೇರಿ 5ನೇ ಹಂತ ಯೋಜನೆ ಅನುಷ್ಠಾನಗೊಳ್ಳಲಿದ್ದು, ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ”.
”ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರಿಗೆ ಬಂದಿದ್ದಾಗ “ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ” ಎಂದು ಹೇಳಿದ್ದರು. ಅವರು ಹೇಳಿದ್ದ ಭವಿಷ್ಯ ಇಂದು ನಿಜವಾಗಿದೆ” ಎಂದರು.