ಧರ್ಮಸ್ಥಳ : ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದರು. ಸಿಎಂ ಹಾಗೂ ಡಿಸಿಎಂ ಡಿಕೆಶಿ ಬರುತ್ತಿದ್ದಂತೆ ಭಕ್ತರು ಜೈ ಶ್ರೀ ರಾಮ್ ಘೋಷಣೆ ಕೂಗಿದರು.
ಧರ್ಮಸ್ಥಳಕ್ಕೆ ಆಗಮಿಸಿದ ಸಿದ್ದರಾಮಯ್ಯ, ಡಿಕೆಶಿಗೆ ವಾದ್ಯಗೋಷ್ಟಿ ಭವ್ಯ ಸ್ವಾಗತ ಕೋರಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆ ಆದರದ ಸ್ವಾಗತ ಕೋರಿದರು. ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಮಂಜುನಾಥ ಸ್ವಾಮಿಗೆ ಅವರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.