alex Certify BREAKING: ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು: ನಾನೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಈ ಕುರಿತಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ, ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇವೆ ಅಷ್ಟೇ. ನಾನು ಯಾವತ್ತೂ ಏನು ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಪಕ್ಷ ಹೇಳಿದಂತೆ ಕೇಳುತ್ತೇವೆ ಎಂದು ತಿಳಿಸಿದ್ದಾರೆ.

ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ. ಸದ್ಯ ನಾನು ಮುಖ್ಯಮಂತ್ರಿ ಆಗಿದ್ದೇನೆ. ನಾನೇ ಹುದ್ದೆಯಲ್ಲಿ ಮುಂದುವರೆಯಲಿದ್ದೇನೆ ಎಂದು ಸಿಎಂ ಹೇಳಿದ್ದರು. ಅವರ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಇದರ ನಡುವೆಯೇ ಸಿಎಂ ಹೇಳಿಕೆ ಬಗ್ಗೆ ಡಿಸಿಎಂ ಪ್ರತಿಕ್ರಿಯೆ ನೀಡಿ, ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದು, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...