
ಬೆಂಗಳೂರು: ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಬರಗಾಲ ಆವರಿಸಿದ್ದು, 194 ತಾಲೂಕುಗಳಲ್ಲಿ ತೀವ್ರ ಬರವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬರ ನಿರ್ವಹಣೆ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ನೀರು ಪೂರೈಸಲು ಎಷ್ಟೇ ಹಣ ಬೇಕಿದ್ದರೂ ಸರ್ಕಾರ ಕೊಡುತ್ತದೆ. ಜಿಲ್ಲೆ ಹಾಗೂ ತಾಲೂಕು ಆದಳಿತ ಮಟ್ಟದಲ್ಲಿಯೂ ಸಭೆ ನಡೆದಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂಪಾಯಿ ಹಣವಿದೆ. ಕುಡಿಯುವ ನೀರಿಗೆ ಸಮಸ್ಯೆಯಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.