
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಪರಾಧ ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ ಎಂದು ಲೋಕಾಯುಕ್ತ ಪೊಲೀಸರು ಅಂತಿಮ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದೆ. ಮತ್ತೊಂದು ಕಡೆ ಇಡಿ ಅಧಿಕಾರಿಗಳ ವಿಚಾರಣೆ ಮುಂದುವರೆದಿದೆ.
ನಗರ ಯೋಜನಾ ಶಾಖೆಯ ಮುಖ್ಯಸ್ಥ ಶಿವರಾಮಯ್ಯ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ನಗರ ಯೋಜನಾ ಶಾಖೆಯ ಮುಖ್ಯಸ್ಥ ಶಿವರಾಮಯ್ಯ ಅವರಿಗೆ ನೋಟಿಸ್ ನೀಡಲಾಗಿದ್ದು, ಇಂದು ಕಚೇರಿಗೆ ಬಂದು ವಿಚಾರಣೆ ಎದುರಿಸುವಂತೆ ಇಡಿ ಸೂಚನೆ ನೀಡಿದೆ. ಕೆಸರೆ ಗ್ರಾಮದ ಸರ್ವೇ ನಂಬರ್ 464ರ ಭೂಮಿಯ ಸಂಬಂಧ ಅವರನ್ನು ವಿಚಾರಣೆಗೆ ಕರೆಯಲಾಗಿದೆ. ದೇವರಾಜು ಬಳಿ ಮಲ್ಲಿಕಾರ್ಜುನ ಸ್ವಾಮಿ ಭೂಮಿ ಖರೀದಿಸಿದ್ದರು. ಅದೇ ಭೂಮಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ದಾನವಾಗಿ ಬಂದಿತ್ತು.