ಬೆಂಗಳೂರು: ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುತ್ತಿದ್ದು, ಇನ್ನು ಪ್ರತಿ ದಿನ ಮೊಟ್ಟೆ ವಿತರಿಸಲಾಗುವುದು.
ನಾಲ್ಕು ದಿನದ ಮೊಟ್ಟೆ ವೆಚ್ಚವನ್ನು ಅಜೀಯ್ ಪ್ರೇಮ್ ಜೀ ಪ್ರತಿಷ್ಠಾನ ಭರಿಸಲಿದೆ. ಈ ಸಂಬಂಧ ರಾಜ್ಯ ಸರ್ಕಾರದ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ವಾರದಲ್ಲಿ ಎರಡು ದಿನ ಸರ್ಕಾರದಿಂದ, 4 ದಿನ ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನದಿಂದ ಮೊಟ್ಟೆ ವಿತರಿಸುವ ಕುರಿತಂತೆ ಒಪ್ಪಂದ ಮಾಡಿಕೊಳ್ಳಲಾಗಿದೆ.
ಪೂರಕ ಪೌಷ್ಟಿಕ ಆಹಾರ ನೀಡಲು ಮೂರು ವರ್ಷಗಳಿಗೆ ಅಜೀಮ್ ಪ್ರೇಮ್ ಜೀ ಫೌಂಡೇಶನ್ ಗೆ ಸುಮಾರು 1,500 ಕೋಟಿ ರೂ. ವೆಚ್ಚವಾಗಲಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುವುದು.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 55 ಲಕ್ಷ ಮಕ್ಕಳಿಗೆ ಮತ್ತೆ ವಿತರಿಸಲಾಗುವುದು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಲಾ ಮಕ್ಕಳಿಗೆ ಸಮಾನ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಉತ್ತಮ ಆರೋಗ್ಯ ನೀಡುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ಅಜೀಮ್ ಪ್ರೇಮ್ ಜೀ, ಶಾಸಕ ರಿಜ್ವಾನ್ ಅರ್ಷದ್ ಮೊದಲಾದವರಿದ್ದರು.