alex Certify ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ನಿರಂತರ 5 ಗಂಟೆ ತ್ರಿಫೇಸ್ ವಿದ್ಯುತ್: ಸಿಎಂ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ನಿರಂತರ 5 ಗಂಟೆ ತ್ರಿಫೇಸ್ ವಿದ್ಯುತ್: ಸಿಎಂ ಆದೇಶ

 ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ನಿರಂತರ 5 ಗಂಟೆ ಫೇಸ್ ವಿದ್ಯುತ್ ಸರಬರಾಜು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿಗಳು, ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರಾಟ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಭಾರಿ ಹೆಚ್ಚಾಗಿದೆ. ರೈತರ ಕೃಷಿ ಪಂಪ್ಸೆಟ್ ಗಳಿಗೆ ಪ್ರತಿದಿನ ಐದು ಗಂಟೆ ತಡೆರಹಿತವಾಗಿ ತ್ರೀಫೇಸ್ ವಿದ್ಯುತ್ ಪೂರೈಕೆ ಮಾಡುವಂತೆ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಲಭ್ಯವಿರುವ ವಿದ್ಯುತ್ ಸಮರ್ಪಕವಾಗಿ ಹಂಚಿಕೆಯಾಗಬೇಕು. ಈ ನಿಟ್ಟಿನಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...