ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ವಿಜಯಪುರ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಂಚಮಸಾಲಿ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಿದ ವ್ಯಕ್ತಿಯ ಬಂಧನಕ್ಕೆ ಒತ್ತಾಯಿಸಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹೋರಾಟ ಕೈಗೊಂಡಿದ್ದರು. ಒತ್ತಡಕ್ಕೆ ಮಾಡಿದ ಪೊಲೀಸರು ಪೋಸ್ಟ್ ಮಾಡಿದ ಯುವಕನ ವಿರುದ್ಧ ದಾಖಲಿಸಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಬೋರಗಿ ಗ್ರಾಮದ ಈರಣ್ಣ ಬಸವಂತರಾಯ ರಟಕಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ನಡೆದ ಲಾಠಿಚಾರ್ಜ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಫೋಟೋ ಬಳಸಿ ಪೋಸ್ಟ್ ಹಾಕಿದ್ದ ಈರಣ್ಣ ಮುಖ್ಯಮಂತ್ರಿಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿದ್ದರು. ಇದನ್ನು ಖಂಡಿಸಿದ ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಿದ್ದಾರೆ.