ಬೆಂಗಳೂರು: ನೇಕಾರರ ವಿಶೇಷ ಯೋಜನೆ ಅಡಿಯ 20 ಹೆಚ್.ಪಿ.ವರೆಗಿನ ಸಾಮರ್ಥ್ಯದ ವಿದ್ಯುತ್ ಮಗ್ಗದ ಘಟಕಗಳಿಗೆ ಪ್ರತಿ ಯೂನಿಟ್ ಗೆ 1.25 ರೂ. ರಿಯಾಯಿತಿ ತರದ ವಿದ್ಯುತ್ ಮುಂದುವರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗ ಸಲ್ಲಿಸಿದ ಬೇಡಿಕೆಗಳಿಗೆ ಸ್ಪಂದಿಸಿದ ಸಿಎಂ ಭರವಸೆ ನೀಡಿದ್ದಾರೆ.
ನೇಕಾರರಿಗೆ 250 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ಆಯವ್ಯಯದಲ್ಲಿ ಘೋಷಿಸಿದ್ದು, ಶೀಘ್ರವೇ ಆದೇಶ ಹೊರಡಿಸಲಾಗುವುದು ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ 2ಎ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಿದ್ದು, ನೇಕಾರರು ಸದ್ಬಳಕೆ ಮಾಡಿಕೊಳ್ಳುವಂತೆ ಸಿಎಂ ತಿಳಿಸಿದ್ದಾರೆ.