ನವದೆಹಲಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು, ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಆದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಅಂಬಾರಿ ಗಂಧದ ಹಾರ ಹಾಕಿ, ಮೈಸೂರು ಪೇಟಾ ತೊಡಿಸಿ ಸನ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಗೆ ಗಂಧದ ಅಂಬಾರಿಯನ್ನು ಉಡುಗೊರೆಯಾಗಿ ನೀಡಿದರು.
ಇಂದು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಸಲ್ಲಿಸಿದ್ದಾರೆ.ಈ ಬಾರಿಯ ಮೈಸೂರು ದಸರಾ ವೇಳೆ ಏರ್ ಶೋ ನಡೆಸುವ ಚಿಂತನೆ ಇದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಂತೆಯೇ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಂದು ದಸರಾಗೆ ಅದ್ದೂರಿಯಾಗಿ ಚಾಲನೆ ನೀಡಲಾಗುತ್ತದೆ , ಅಕ್ಟೋಬರ್ 15ರಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಆಗುತ್ತೆ.. ವಸ್ತು ಪ್ರದರ್ಶನ ಕೂಡ ಅಂದೇ ಆರಂಭ ಆಗಲಿದೆ,. ಇದೇ ಸಂದರ್ಭದಲ್ಲಿ ಏರ್ ಶೋ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.