ಬೆಂಗಳೂರು : ಕನ್ನಡ ರಾಜ್ಯೋತ್ಸವದ ದಿನವೇ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಧ್ವಜರೋಹಣದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಪರೀಕ್ಷೆಗಳನ್ನು ಮಾಡುತ್ತೆ. ನಾವು ಇದನ್ನು ವಿರೋಧ ಮಾಡಬೇಕುತ್ತಾದೆ. ನಮ್ಮ ಮಕ್ಕಳಿಗೆ ಯಾವ ಭಾಷೆ ಗೊತ್ತಿರುತ್ತದೆಯೋ ಅದೇ ಭಾಷೆಯಲ್ಲಿ ಪರೀಕ್ಷೆ ಮಾಡಬೇಕು. ನಾನು ಮತ್ತೆ ಅದನ್ನು ಪರಿಶೀಲನೆ ಮಾಡಿ ಕೇಂದ್ರ ಸರ್ಕಾರ, ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.
ನವೆಂಬರ್ 1 2023 ರಿಂದ 2024 ನವೆಂಬರ್ 1 ರವರೆಗೆ ಕನ್ನಡ ಸಂಭ್ರಮ ವರ್ಷವನ್ನು ಆಚರಣೆ ಮಾಡುವಂತೆ ಘೋಷಣೆ ಮಾಡಲಾಗಿದ್ದು, ಮುಂದಿನ 1 ವರ್ಷದವರೆಗೆ ಕನ್ನಡ ಸಂಭ್ರಮವನ್ನು ಆಚರಿಸುತ್ತೇವೆ. ಇಡೀ ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದೇವೆ ಎಂದರು.
ನಮ್ಮ ಭಾಷೆ, ನೆಲ, ಜಲ ಸಂಸ್ಕೃತಿ ಬಗ್ಗೆ ಪ್ರತಿಯೊಬ್ಬ ಕನ್ನಡಿಗನೂ ಕೂಡ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡನಾಡು ತಾಯಿನಾಡು, ಕನ್ನಡ ಭಾಷೆ ನನ್ನ ತಾಯಿ ಭಾಷೆ. ಈ ನಾಡಿನ ಋಣ ತೀರಿಸಬೇಕಾದ್ರೆ ಕನ್ನಡ ನೆಲ, ಜಲ ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿರುವ ಪ್ರತಿಯೊಬ್ಬರೂ ಕನ್ನಡ ಮಾತನಾಡಬೇಕು. ಬೇರೆ ರಾಜ್ಯಗಳಲ್ಲಿ ಅಧಿಕೃತ ಭಾಷೆಯನ್ನೇ ಹೆಚ್ಚು ಬಳಕೆ ಮಾಡ್ತಾರೆ. ಅದೇ ರೀತಿ ಕರ್ನಾಟಕದಲ್ಲಿರುವ ಪ್ರತಿಯೊಬ್ಬರೂ ಕನ್ನಡದಲ್ಲಿ ಮಾತನಾಡಬೇಕು. ಕನ್ನಡ ಭಾಷೆ ಮಾತನಾಡದೇ ಕರ್ನಾಟಕದಲ್ಲಿ ಇರುವವರಿದ್ದಾರೆ. ಆದರೆ ಅವರೂ ಸಹ ಕನ್ನಡ ಭಾಷೆಯನ್ನು ಮಾತನಾಡಬೇಕು. ಕನ್ನಡ ಭಾಷೆ ನಮ್ಮ ಸಾರ್ವಭೌಮ ಭಾಷೆ ಎಂದು ತಿಳಿಸಿದ್ದಾರೆ.
ಸರ್ಕಾರದಲ್ಲಿ ನಡೆಯುವ ಅಡಳಿತ ಕನ್ನಡ ಭಾಷೆಯಲ್ಲೇ ಆಗಬೇಕು. ಕೇಂದ್ರ ಸರ್ಕಾರಕ್ಕೆ ವ್ಯವಹಿಸುವಾಗ ಮಾತ್ರ ಇಂಗ್ಲಿಷ್ ಭಾಷೆ ಬಳಸಬೇಕು. ಅಡಳಿತ ಮಾಡುವಾಗ ಕನ್ನಡದಲ್ಲೇ ವ್ಯವಹರಿಸಬೇಕು. ನಮ್ಮ ಮಕ್ಕಳಿಗೆ ಯಾವ ಭಾಷೆ ಗೊತ್ತಿರುತ್ತದೆಯೋ ಅದೇ ಭಾಷೆಯಲ್ಲಿ ಕನ್ನಡ ಪರೀಕ್ಷೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದ ಬಡಜನತೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅನ್ನಭಾಗ್ಯ, ಗೃಹಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದೆ. ಶಕ್ತಿ ಯೋಜನೆ ಮೂಲಕ 86 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ 1.28 ಕೋಟಿ ಕುಟುಂಬಗಳಿಗೆ 5 ಕೆಜಿ ಅಕ್ಕಿ ಬದಲು ತಲಾ 170 ರೂ.ಗಳನ್ನು ಕೊಟ್ಟಿದ್ದೇವೆ. ಗೃಹಜ್ಯೋತಿ ಕಾರ್ಯಕ್ರಮದಲ್ಲಿ ಸುಮಾರು 1.38 ಕೋಟಿ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಿದ್ದೇವೆ. ಮನೆಯ ಯಜಮಾನಿಗೆ 2,000 ರೂ.ಇಲ್ಲಿವರೆಗೆ 1.07 ಕೋಟಿ ರೂ. ನೀಡಿದ್ದೇವೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ, ಅಂಗನವಾಡಿ ಮಕ್ಕಳಿಗೆ ಉಚಿತ ಹಾಲು ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಸರ್ಕಾರವು ಕನ್ನಡಿಗರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುತ್ತಿದ್ದೇವೆ. ಕರ್ನಾಟಕವನ್ನು ಇನ್ನೂ ಸದೃಢವಾಗಿ ನಿರ್ಮಾಣ ಮಾಡುವ ಕೆಲಸ ಮಾಡೋಣ ಎಂದು ಹೇಳಿದರು.