alex Certify 504 ʻKASʼ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

504 ʻKASʼ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಬೆಂಗಳುರು : 504 ಕೆಎಎಸ್ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲಿ ಖಾಲಿ ಇರುವ 656 ಕೆಎಎಸ್‌ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಅದರಲ್ಲಿ 504 ಹುದ್ದೆಗಳ ನೇಮಕಾತಿಗೆ ಸಮ್ಮತಿ ಸಿಕ್ಕಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ನೇಮಕಾತಿಗೆ ಒಪ್ಪಿಗೆ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಕಾಂಕ್ಷಿಗಳು ನೇಮಕಾತಿ ನಡೆಸುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಎಲ್ಲಾ 504 ಹುದ್ದೆಗಳ ನೇಮಕಾತಿ ನಡೆಸುವಂತೆ ಆರ್‌ ಡಿಪಿಆರ್‌ ಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಹೊಸ ವರ್ಷದ ಆರಂಭದಲ್ಲಿ ಕೆಎಎಸ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...