ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು ಸಲ್ಲಿಕೆಯಾಗಿದೆ. ನಿಯಮ ಮೀರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿದ್ದು, ಇದರ ಬೆನ್ನಲ್ಲೇ ಪ್ರಕರಣದ ವಿವರಣೆ ನೀಡುವ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಗದಿತ ಪ್ರಮಾಣದ ಅನುದಾನ ಇಲ್ಲದಿದ್ದರೂ ಸಿಎಂ ಮೌಖಿಕ ಆದೇಶದ ಮೇರೆಗೆ 387 ಕೋಟಿ ರೂ. ಬಿಡುಗಡೆಯಾಗಿದೆ. ವರುಣಾ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಮಗಾರಿ ನಡೆಸಲಾಗಿದ್ದು, ಇದು ಅಧಿಕಾರ ದುರ್ಬಳಕೆ, ಕರ್ನಾಟಕ ನಗರಾಭಿವೃದ್ಧಿ ಕಾನೂನಿಗೆ ವಿರುದ್ಧವಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಲು ಅನುಮತಿ ನೀಡಬೇಕು ಎಂದು ಆಗಸ್ಟ್ 27ರಂದು ದೂರು ನೀಡಲಾಗಿದೆ.
ಪಿ.ಎಸ್. ನಟರಾಜ್ ಅವರು ದೂರು ನೀಡಿದ್ದು, ಗಂಭೀರ ಸ್ವರೂಪದ ಆರೋಪವಾಗಿರುವುದರಿಂದ ಇಡೀ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಬೇಕು. ದಾಖಲೆ ಸಹಿತ ಸಂಪೂರ್ಣ ವಿವರಣೆ ನೀಡಬೇಕು ಎಂದು ಸೆ. 5 ರಂದು ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ.