ಬೆಳಗಾವಿ: ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್ -ಇ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಗಳಡಿ ಪಕ್ಷಾತೀತವಾಗಿ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಒಟ್ಟು 6 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ. ಅಪೆಂಡಿಕ್ಸ್ –ಇ ಅಡಿ ವಿವಿಧ ಯೋಜನೆಗಳಿಗೆ 4000 ಕೋಟಿ ರೂ., ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಎಲ್ಲಾ ಕ್ಷೇತ್ರಗಳಿಗೂ ಒಟ್ಟಾರೆ 2000 ಕೋಟಿ ರೂ. ಅನುದಾನ ನೀಡಲಾಗುವುದು. ಬೆಂಗಳೂರು ನಗರ ಅಭಿವೃದ್ಧಿಗೂ ವಿಶೇಷ ಅನುದಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ.