ಬೆಂಗಳೂರು: ಗದಗ ಜಿಲ್ಲೆಯ ಗಜೇಂದ್ರಗಢ ಪಟ್ಟಣದ ಅತ್ತೆ, ಸೊಸೆ ಇಬ್ಬರೂ ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಗೃಹಲಕ್ಷ್ಮಿ ಯೋಜನೆ ನೆರವಿನ ಹಣ ಸದ್ಬಳಕೆ ಮಾಡಿಕೊಂಡಿದ್ದಾರೆ.
ಗಜೇಂದ್ರಗಡದ ಮಾಲ್ದಾರ್ ಕುಟುಂಬದ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ ಅವರು ಗೃಹಲಕ್ಷ್ಮಿ ಯೋಜನೆಯ 44,000 ರೂ. ಹಣವನ್ನು ತಮ್ಮ 3 ಎಕರೆ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಬಳಕೆ ಮಾಡಿಕೊಂಡಿದ್ದಾರೆ. ಕೊಳವೆ ಬಾವಿ ಕೊರೆಸಲು 60 ಸಾವಿರ ರೂಪಾಯಿ ಖರ್ಚಾಗಿದ್ದು, ಉಳಿದ ಹಣವನ್ನು ಅವರ ಪುತ್ರ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಅನುಕೂಲವಾಗಿರುವ ಬಗ್ಗೆ ಅತ್ತೆ, ಸೊಸೆ ಹೇಳಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
“ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ.
ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ.
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ.” ಎಂದು ಸಿಎಂ ತಿಳಿಸಿದ್ದಾರೆ.
ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ… pic.twitter.com/QtZdRgqOex
— Siddaramaiah (@siddaramaiah) December 15, 2024