ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆದಿದ್ದು, ವಾದ ಮಂಡನೆ ಮುಕ್ತಾಯವಾಗಿದೆ. ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆದಿದ್ದು, ದೂರುದಾರರ ವಾದಕ್ಕೆ ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಉತ್ತರ ನೀಡಿದ್ದಾರೆ.
ಬಹುತೇಕ ಎಲ್ಲರ ವಾದ ಪ್ರತಿವಾದ ಮುಕ್ತಾಯವಾಗಿದ್ದು, ಅಭಿಷೇಕ್ ಸಿಂಘ್ವಿ ಅವರ ಉತ್ತರದ ಬಳಿಕ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.